HomeLatest Newsವರ್ತಕರೇ ಗಮನಿಸಿ : ವಾಣಿಜ್ಯ ತೆರಿಗೆ ಅಧಿಕಾರಿ-ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆಯಿಟ್ರೆ ಈ ಸಂಖ್ಯೆಗೆ ಕರೆ ಮಾಡಿ...

ವರ್ತಕರೇ ಗಮನಿಸಿ : ವಾಣಿಜ್ಯ ತೆರಿಗೆ ಅಧಿಕಾರಿ-ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆಯಿಟ್ರೆ ಈ ಸಂಖ್ಯೆಗೆ ಕರೆ ಮಾಡಿ |UPI

ಬೆಂಗಳೂರು : ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿರುತ್ತದೆ.

ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿರುತ್ತದೆ.

ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಸ ಅಧಿಕಾರಿ/ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು‌ ಸಹಾಯವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular