ಡಿಜಿಟಲ್ ಡೆಸ್ಕ್ : ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ.
ತರೀಕೆರೆ ಸ್ಟೇಷನ್ ನಿಂದ ಮೈಸೂರಿಗೆ ತೆರಳುತ್ತಿದ್ದ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 2 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿದಿದ್ದಾರೆ.ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಭಾರಿ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ.
You Might Also Like
TAGGED:ತಾಳಗುಪ್ಪ-ಮೈಸೂರು