HomeLatest Newsಆ. 15 ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು..?...

ಆ. 15 ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು..? ಇಲ್ಲಿದೆ ಮಾಹಿತಿ

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರ ನೇಮಕ ಮಾಡಿದ್ದು, ಅನಾರೋಗ್ಯ ಮತ್ತಿತರ ಕಾರಣಗಳಿಂದ ಧ್ವಜಾರೋಹಣಕ್ಕೆ ನಿಯೋಜಿಸಲಾದ ಸಚಿವರು ಕಾರ್ಯಕ್ರಮಕ್ಕೆ ಗೈರುಹಾಜರಾದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸೂಚನೆ ನೀಡಲಾಗಿದೆ.

ತುಮಕೂರು ಜಿಲ್ಲೆಗೆ ಡಾ.ಜಿ. ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ. ಪಾಟೀಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೆ.ಹೆಚ್. ಮುನಿಯಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಗೆ ರಾಮಲಿಂಗಾರೆಡ್ಡಿ, ವಿಜಯಪುರ ಜಿಲ್ಲೆಗೆ ಎಂ.ಬಿ. ಪಾಟೀಲ್, ಅವರನ್ನು ಧ್ವಜಾರೋಹಣ ನೆರವೇರಿಸಲು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular