ಬೆಂಗಳೂರು: ರಾಜ್ಯದ 4.5 ಲಕ್ಷ ಅನಧಿಕೃತ ಕೃಷಿ ಪಂಪ್ಸೆಟ್ ಗಳ ಪೈಕಿ 2 ಲಕ್ಷ ಪಂಪ್ಸೆಟ್ ಗಳನ್ನು ಸಕ್ರಮ ಮಾಡಲಾಗಿದೆ. ಇನ್ನು 2.5 ಲಕ್ಷ ಪಂಪ್ಸೆಟ್ ಸಕ್ರಮ ಬಾಕಿ ಇದ್ದು, ಕುಸುಮ್ ಬಿ ಯೋಜನೆಯಡಿ ಅವುಗಳನ್ನು ಸಕ್ರಮ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಸಕ್ರಮಕ್ಕೆ ಬಾಕಿ ಉಳಿದಿರುವ ಎರಡೂವರೆ ಲಕ್ಷಕ್ಕೂ ಅಧಿಕ ಅನಧಿಕೃತ ಕೃಷಿ ನೀರಾವರಿ ಪಂಪ್ ಸೆಟ್ ಗಳಿಗೆ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಅಳವಡಿಸುವ ಬಗ್ಗೆ ಕ್ರಮ ವಹಿಸುವಂತೆ ಇಂಧನ ಇಲಾಖೆಗೆ ಸಿಎಂ ಸೂಚಿಸಿದ್ದಾರೆ.
ಮಂಗಳವಾರ ಕುಸುಮ್ ಬಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ, ಒಟ್ಟು 4.5 ಲಕ್ಷ ಅನಧಿಕೃತ ಐಪಿ ಸೆಟ್ ಗಳ ಪೈಕಿ ಎರಡು ಲಕ್ಷ ಪಂಪ್ ಸಂಪರ್ಕಗಳನ್ನು ಅಧಿಕೃತಗೊಳಿಸಲಾಗಿದೆ. ಉಳಿದವುಗಳನ್ನು ಕುಸುಮ್ ಬಿ ಯೋಜನೆಯಡಿ ಕೈಗೊತ್ತಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರ ಶೇಕಡ 30ರಷ್ಟು, ರಾಜ್ಯ ಸರ್ಕಾರ ಶೇಕಡ 50ರಷ್ಟು ಸಹಾಯಧನ ನೀಡುತ್ತಿದ್ದು, ಫಲಾನುಭವಿಗಳು ಶೇಕಡ 20ರಷ್ಟು ಭರಿಸಬೇಕಿದೆ. ಈ ಯೋಜನೆಯಡಿ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡುತ್ತಿದೆ. ಈ ಯೋಜನೆಯಡಿ 40,000 ಪಂಪ್ಸೆಟ್ ಗಳಿಗೆ ಅನುಮೋದನೆ ನೀಡಲಾಗಿದೆ. 25000 ರೈತರು ಹೆಚ್ಚುವರಿಯಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು:
— DIPR Karnataka (@KarnatakaVarthe) July 22, 2025
• ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.
• ಈ…