HomeLatest Newsರಾಜ್ಯದ ರೈತರಿಗೆ ಗುಡ್ ನ್ಯೂಸ್ : 'ಕುಸುಮ್-ಬಿ’ ಯೋಜನೆಯಡಿ 'ಸೋಲಾರ್ ಪಂಪ್ ಸೆಟ್' ಅಳವಡಿಕೆಗೆ ...

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕುಸುಮ್-ಬಿ’ ಯೋಜನೆಯಡಿ ‘ಸೋಲಾರ್ ಪಂಪ್ ಸೆಟ್’ ಅಳವಡಿಕೆಗೆ ಶೇ. 80 ರಷ್ಟು ಸಬ್ಸಿಡಿ

ಬೆಂಗಳೂರು : ರಾಜ್ಯದ ರೈತರಿಗೆ ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆಗೆ ಶೇ. 80 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು, ಆಸಕ್ತರು ಇದರ ಪ್ರಯೋಜನ ಪಡೆಯಬಹುದಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿದೆ.

  • ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ.
  • ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು.
  • 25ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ.
  • ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆ ಒದಗಿಸಲಿದೆ.
  • ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular