ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಹಿಂದೆ ಒಮ್ಮೆ ಭಾರತಿ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ಭೈರತಿ ಬಸವರಾಜ್, ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ತನಿಖಾಧಿಕಾರಿ ಪ್ರಕಾಶ್ ರಾಥೋಡ್, ಭೈರತಿ ಬಸವರಾಜ್ ಅವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಸುಪಾರಿ ಕಿಲ್ಲರ್ ಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಆದರೆ ಪ್ರಮುಖ ಆರೋಪಿ ಜಗದೀಶ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.