ಭೋಪಾಲ್: ಕಾರು ಡಿಕ್ಕಿಯಾಗಿ ನಾಲ್ವರು ಕನ್ವಾರ್ ಯಾತ್ರಿಕರು ಸಾವನ್ನಪ್ಪಿರುವ ಘೋರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಶಿತ್ಲಾ ಮಾತಾ ತಿರಹಾ ಬಳಿ ಈ ಘಟನೆ ನಡೆದಿದೆ. ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕನ್ವಾರ್ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.