HomeLatest NewsBREAKING: ಎಸ್ಎಸ್ಎಲ್ಸಿ ಪರೀಕ್ಷೆ -3 ಫಲಿತಾಂಶ ಪ್ರಕಟ

BREAKING: ಎಸ್ಎಸ್ಎಲ್ಸಿ ಪರೀಕ್ಷೆ -3 ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷೆ -3 ಫಲಿತಾಂಶ ಪ್ರಕಟಿಸಿದೆ.

ಜುಲೈ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-3 ನ್ನು ದಿನಾಂಕ:05.07.2025 ರಿಂದ 12.07.2025ರವರೆಗೆ ನಡೆಸಲಾಯಿತು.. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಮತ್ತು https://kseab.karnataka.gov.in ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

2025 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶದ ಅಂಕಿಅಂಶಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

05-07-2025 80 12-07-2025 ರವರೆಗೆ ರಾಜ್ಯಾದ್ಯಂತ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು.

 ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 18-07-2025 ರಿಂದ 21-07-2025 ರವರೆಗೆ ರಾಜ್ಯದ 27 ಶೈಕ್ಷಣಿಕ ಜಿಲ್ಲೆಗಳ 88 ಮೌಲ್ಯಮಾಪನ ಕೇಂದ್ರಗಳಲ್ಲಿ 20443 ಮೌಲ್ಯಮಾಪಕರಿಂದ ನಡೆಸಲಾಯಿತು.

ವಿದ್ಯಾರ್ಥಿಗಳ ವೈಯಕ್ತಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ದಿನಾಂಕ 23-07-2025 ರಂದು ಸಂಜೆಯಿಂದ https:/karresults.nic.in , https://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ 23-07-2025 ರಂದು ಎಸ್.ಎಂ.ಎಸ್ ಮೂಲಕ ರವಾನಿಸಲಾಗುವುದು.

ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in ದ ಶಾಲಾ ಲಾಗಿನ್ ನಲ್ಲಿ 23-07-2025 ರಂದು ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular