HomeLatest Newsಆಗಸ್ಟ್ 5 ರಿಂದ ಅಧ್ಯಾಪಕರು, ವಿದ್ಯಾರ್ಥಿಗಳಿಗೆ 3 ದಿನಗಳ 'ಸರ್ಟಿಫಿಕೇಟ್ ಕೋರ್ಸ್' ಕಾರ್ಯಗಾರ

ಆಗಸ್ಟ್ 5 ರಿಂದ ಅಧ್ಯಾಪಕರು, ವಿದ್ಯಾರ್ಥಿಗಳಿಗೆ 3 ದಿನಗಳ ‘ಸರ್ಟಿಫಿಕೇಟ್ ಕೋರ್ಸ್’ ಕಾರ್ಯಗಾರ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆ.05 ರಿಂದ 07 ರವರೆಗೆ “Science Communication: Strategies for Reaching Diverse Audiences” ಎಂಬ ವಿಷಯದ ಕುರಿತು ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶೈಕ್ಷಣಿಕ ತಜ್ಞರು, ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು Google-form-https://forms.gle/iyPn85smZ81RGGnf6 ಮೂಲಕ ದಿ:02/08/2025 ರೊಳಗಾಗಿ ನೋಂದಾಯಿಸಿಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ಶ್ರೀನಿವಾಸು ವಿ. ಕೆ. -ಮೊ: 9620767819 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular