HomeLatest Newsಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸರ್ಕಾರ...

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಬಿ ಖಾತಾ ಆಸ್ತಿಗೆ ಎ ಖಾತಾ ನೀಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜಧಾನಿ ಬೆಂಗಳೂರು ಬಳಿಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಅಥವಾ ಅದಕ್ಕೆ ಸಮನಾದ ಖಾತಾ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿಯೇ ಈ ಕುರಿತ ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆ ಇದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ ಖಾತಾ ಗೊಂದಲಗಳಿಗೆ ತೆರೆ ಎಳೆಯಲು ರಾಜ್ಯ ಸರ್ಕಾರ 2024ರ ಸೆಪ್ಟೆಂಬರ್ 30ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಅಥವಾ ಅದಕ್ಕೆ ಸಮಾನವಾದ ಕಾನೂನುಬದ್ಧ ಖಾತಾ ನೀಡಲು ಕಳೆದ ಸಂಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಿ ಖಾತಾ ನೀಡುವ ಯೋಜನೆ ಜಾರಿ ಮಾಡಲಾಗಿದ್ದು ಅದೇ ಮಾದರಿಯಲ್ಲಿ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೂ ಅನ್ವಯಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಈಶ್ವರ್ ಖಂಡ್ರೆ ನೇತೃತ್ವದ ಉಪ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಸರ್ಕಾರಕ್ಕೆ ಶಿಫಾರಸು ಮಾಡಲಿದ್ದು, ಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular