HomeLatest Newsಸ್ಮಾರ್ಟ್ ಮೀಟರ್ ಅಕ್ರಮ: ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ

ಸ್ಮಾರ್ಟ್ ಮೀಟರ್ ಅಕ್ರಮ: ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಶಾಸಕರಾದ ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಅವರು ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ಸಂಬಂಧ ಬುಧವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ.

ಆರೋಪಿಗಳ ವಿರುದ್ಧ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದ್ದು, ಆಗಸ್ಟ್ 11ಕ್ಕೆ ವಿಚಾರಣೆ ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಮಾರ್ಟ್ ಮೀಟರ್ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ದಾವಣಗೆರೆ ರಾಜೇಶ್ವರಿ ಎಲೆಕ್ಟ್ರಿಕಲ್ ಸೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ. ನೇರವಾಗಿ ಟೆಂಡರ್ ನೀಡಲಾಗಿದ್ದು, ಇದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ(ಕೆಟಿಪಿಪಿ) ಅಧಿನಿಯಮ -2000, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸ್ಮಾರ್ಟ್ ಮೀಟರ್ ಟೆಂಡರ್‌ ನಲ್ಲಿ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular