HomeLatest NewsBREAKING: ಪಿಎಸ್ಐ ಮೇಲೆ ಹಲ್ಲೆ, ಇಬ್ಬರು ಕಳ್ಳರ ಕಾಲಿಗೆ ಗುಂಡೇಟು

BREAKING: ಪಿಎಸ್ಐ ಮೇಲೆ ಹಲ್ಲೆ, ಇಬ್ಬರು ಕಳ್ಳರ ಕಾಲಿಗೆ ಗುಂಡೇಟು

ಧಾರವಾಡ: ಪಿಎಸ್ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರ ಮೇಲೆ ಫೈರಿಂಗ್ ಮಾಡಲಾಗಿದೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಿರಿನಗರ ಬಡಾವಣೆಯ ಮನೆಯೊಂದರಲ್ಲಿ ಕಳ್ಳತನ ನಡೆಸಲಾಗಿದ್ದು, ನಂತರ ಪರಾರಿಯಾಗುವ ವೇಳೆ ಪೊಲೀಸರ ಕೈಗೆ ಕಳ್ಳರು ಸಿಕ್ಕಿ ಬಿದ್ದಿದ್ದಾರೆ. ಮುಜಾಮಿಲ್ ಮತ್ತು ವಿಜಯ್ ಎಂಬುವವರನ್ನು ಪೊಲೀಸರು ಸೆರೆಹಿಡಿದಿದ್ದು, ಈ ವೇಳೆ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಕಳ್ಳರು ಪರಾರಿಯಾಗಲು ಮುಂದಾಗಿದ್ದಾರೆ. ಪಿಎಸ್ಐ ಮಲ್ಲಿಕಾರ್ಜುನ ಇಬ್ಬರ ಮೇಲೆ ಫೈರಿಂಗ್ ಮಾಡಿದ್ದು, ಮುಜಾಮಿಲ್ ಮತ್ತು ವಿಜಯ್ ಕಾಲಿಗೆ ಗುಂಡೇಟು ಬಿದ್ದಿದೆ. ಇಬ್ಬರನ್ನೂ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular