HomeLatest Newsರಾಜ್ಯದಲ್ಲಿ ಇದೇ ಮೊದಲಬಾರಿಗೆ ಗ್ರಾಪಂ ಕಾರ್ಯದರ್ಶಿ, ಲೆಕ್ಕ ಸಹಾಯಕರ ವರ್ಗಾವಣೆಗೆ ಕೌನ್ಸೆಲಿಂಗ್

ರಾಜ್ಯದಲ್ಲಿ ಇದೇ ಮೊದಲಬಾರಿಗೆ ಗ್ರಾಪಂ ಕಾರ್ಯದರ್ಶಿ, ಲೆಕ್ಕ ಸಹಾಯಕರ ವರ್ಗಾವಣೆಗೆ ಕೌನ್ಸೆಲಿಂಗ್

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗ್ರಾಮ ಪಂಚಾಯಿತಿ ಗ್ರೇಡ್ 1 ಮತ್ತು 2 ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದುವರೆಗೆ 2697 ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿದೆ. 2024 -25ರ ರಾಜ್ಯ ಬಜೆಟ್ ನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸುವುದಾಗಿ ಘೋಷಿಸಲಾಗಿತ್ತು. ಅಂತೆಯೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಮಂಗಳವಾರದಿಂದ ಕೌನ್ಸೆಲಿಂಗ್ ಆರಂಭಿಸಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದವರು ವರ್ಗಾವಣೆಗೆ ಅರ್ಹರಾಗಿರುತ್ತಾರೆ. ವಿಕಲಚೇತನರು, ಗಂಭೀರ ಅನಾರೋಗ್ಯ ಸಮಸ್ಯೆ ಇರುವವರಿಗೆ ವಿನಾಯಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular