HomeLatest NewsBIG NEWS: ಮಹದಾಯಿ ವಿಚಾರ: ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

BIG NEWS: ಮಹದಾಯಿ ವಿಚಾರ: ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ ನೋಡೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಹೇಳಿದ್ದಾರೆ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು. ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹದಾಯಿ ವಿಚಾರವಾಗಿ ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡುತ್ತೇನೆ. ಇದು ನಮ್ಮ ರಾಜ್ಯದ ಸ್ವಾಭಿಮಾನದ ಪ್ರಶ್ನೆ. ಈ ವಿಚಾರದಲ್ಲಿ ನಮ್ಮ ಸಂಸದರು ಬಾಯಿ ಮುಚ್ಚಿಕೊಂಡಿರುವುದೇ ದೊಡ್ಡ ತಪ್ಪು. ನಮ್ಮ ರಾಜ್ಯದ 28 ಲೋಕಸಭೆ ಸದಸ್ಯರು, 12 ರಾಜ್ಯಸಭೆ ಸದಸ್ಯರು ಒಗ್ಗಟ್ಟಿನಿಂದ ಹೋರಾಡಿ ರಾಜ್ಯದ ಗೌರವ ಕಾಪಾಡಬೇಕಾಗಿದೆ. ಗೋವಾದ ಕೇವಲ ಒಂದು ಸಂಸದರಿಗಾಗಿ ನಮ್ಮ ಕರ್ನಾಟಕವನ್ನು ಮಾರಿಕೊಳ್ಳಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಹೇಳಿದರು.

ಈ ವಿಚಾರವಾಗಿ ಬಿಜೆಪಿ ಸಂಸದರು, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸರಕಾರದ ಸಚಿವರು ಹಾಗೂ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಬೇಕು. ನಾನು ಕೂಡ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೇಳುತ್ತೇನೆ. ಎಲ್ಲಾ ಸಂಸದರ ನಿಯೋಗವನ್ನು ಕರೆದೊಯ್ಯುವ ಪ್ರಯತ್ನ ಮಾಡುತ್ತೇನೆ. ನಮ್ಮ ಜೊತೆ ಎಲ್ಲರೂ ಬರುವ ನಂಬಿಕೆ ಇದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular