HomeLatest NewsGOOD NEWS : ರಾಜ್ಯ ಸರ್ಕಾರದಿಂದ 'ಅತಿಥಿ ಶಿಕ್ಷಕ'ರಿಗೆ ಗುಡ್ ನ್ಯೂಸ್ : ಗೌರವಧನ ಪಾವತಿಸಲು...

GOOD NEWS : ರಾಜ್ಯ ಸರ್ಕಾರದಿಂದ ‘ಅತಿಥಿ ಶಿಕ್ಷಕ’ರಿಗೆ ಗುಡ್ ನ್ಯೂಸ್ : ಗೌರವಧನ ಪಾವತಿಸಲು ಅನುದಾನ ಬಿಡುಗಡೆ.!

ಬೆಂಗಳೂರು : ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಸಲು ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಜೂನ್-2025ರಿಂದ ಅಕ್ಟೋಬರ್-2025ರವರೆಗೆ (5 ತಿಂಗಳು) ಗೌರವಧನ ಪಾವತಿಸಲು ರೂ.20416.20ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-324ರಡಿ ಲಭ್ಯವಿರುವ ಅನುದಾನದಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ.

ಪ್ರಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ರೂ.20416.20ಲಕ್ಷಗಳ ಅನುದಾನವನ್ನು ಲೆಕ್ಕ ಶೀರ್ಷಿಕೆ 2202-01-197-1-01-300 (2202-00-101-0-61-324) ໖ ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ: ಆಇ 298 ವೆಚ್ಚ-6/2025 ದಿನಾಂಕ:15ನೇ ಜುಲೈ 2025 ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಜೂನ್-2025ರಿಂದ ಅಕ್ಟೋಬರ್-2025ರವರೆಗೆ ಗೌರವಧನ ជយ ៩, : 2202-01-197-1-01-300(2202-00-101-0-61-324) ໖ .20416.200 (ರೂಪಾಯಿ ಇಪ್ಪತ್ತು ಸಾವಿರದ ನಾಲ್ಕು ನೂರ ಹದಿನಾರು ಲಕ್ಷದ ಇಪ್ಪತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular