HomeLatest NewsBREAKING: ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ: 8 ಜನರ ಸ್ಥಿತಿ ಗಂಭೀರ

BREAKING: ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ: 8 ಜನರ ಸ್ಥಿತಿ ಗಂಭೀರ

ಹಾಸನ: ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.

ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರಲ್ಲಿ ಓರ್ವ ಚಾಲಕ ಸೇರಿ 8 ಜನರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular