HomeUncategorizedSHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

SHOCKING: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಮಗ ನದಿಯಲ್ಲಿ ಕೊಚ್ಚಿ ಹೋದ ವಿಷಯ ತಿಳಿದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗಣಪತಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮನೆಗೆ ಹಿಂಭಾಗದ ಕೆರೆಗೆ ಹಾರಿ ತಾಯಿ ರವಿಕಲಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ.

ಕೊಳಮಗಿ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಭದ್ರಾ ನದಿಗೆ ಪಿಕಪ್ ವಾಹನ ಬಿದ್ದಿದ್ದು, ಈ ವಾಹನದಲ್ಲಿದ್ದ ಸಮಂತ್ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಕಾಫಿ ತೋಟದ ಕಾರ್ಮಿಕರನ್ನು ಕರೆತರಲು ತೆರಳುವಾಗ ವಾಹನ ನದಿಗೆ ಬಿದ್ದಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗ ಸುಮಂತ್ ಪಿಕಪ್ ವಾಹನದ ಸಮೇತ ಭದ್ರಾ ನದಿಗೆ ಬಿದ್ದಿದ್ದ ವಿಚಾರ ತಿಳಿದು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular