HomeLatest Newsಏರ್ ಇಂಡಿಯಾ ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…!

ಏರ್ ಇಂಡಿಯಾ ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ…!

ಮುಂಬೈ: ಏರ್ ಇಂಡಿಯಾ ವಿಮಾನದಲ್ಲಿ ಥಾಯ್ಲೆಂಡ್ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಸ್ಕತ್ ನಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಥಾಯ್ಲೆಂಡ್ ನ ಮಹಿಳೆ ಗುರುವಾರ ಮಗುವಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ಏರ್ ಇಂಡಿಯಾ, ಥಾಯ್ಲೆಂಡ್ ಮಹಿಳೆಗೆ ಪ್ರಯಾಣದ ವೇಳೆಯಲ್ಲಿ ಹೆರಿಗೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನದಲ್ಲಿದ್ದ ಸಿಬ್ಬಂದಿ ಹೆರಿಗೆಗೆ ಸೂಕ್ತವಾದ ಎಲ್ಲ ವ್ಯವಸ್ಥೆ ಮಾಡಿದ್ದಾರೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕರಲ್ಲಿ ಒಬ್ಬ ನರ್ಸ್ ಹೆರಿಗೆಗೆ ಸಹಾಯ ಮಾಡಿದರು. ಆಗಸದಲ್ಲಿದ್ದಾಗಲೇ ಪೈಲೆಟ್ ಗಳು ಮಾಹಿತಿ ನೀಡಿದ್ದ ಕಾರಣ ವಿಮಾನ ಮುಂಬೈನಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ನಿಲ್ದಾಣದಲ್ಲಿ ಕಾದಿದ್ದ ಆಂಬುಲೆನ್ಸ್ ಮತ್ತು ವೈದ್ಯಕೀಯ ತಂಡ ಸಮೀಪದ ಆಸ್ಪತ್ರೆಗೆ ಮಹಿಳೆ ಮತ್ತು ಮಗುವನ್ನು ಸಾಗಿಸಿದ್ದಾರೆ. ಇಬ್ಬರೂ ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದೆ.

ಮಹಿಳೆ ತನ್ನ ತಾಯ್ನಾಡಿಗೆ ಮರಳಲು ಸಹಾಯ ಮಾಡಲು ಮುಂಬೈನಲ್ಲಿರುವ ಥೈಲ್ಯಾಂಡ್ ಕಾನ್ಸುಲೇಟ್ ಜನರಲ್ ಜೊತೆ ಸಂಪರ್ಕದಲ್ಲಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular