HomeLatest Newsರಾಜ್ಯಾದ್ಯಂತ ಆಸ್ಪತ್ರೆ, ಶಿಕ್ಷಣ ಸಂಸ್ಥೆ, ಅಪಾರ್ಟ್ಮೆಂಟ್, ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ ಶೇ....

ರಾಜ್ಯಾದ್ಯಂತ ಆಸ್ಪತ್ರೆ, ಶಿಕ್ಷಣ ಸಂಸ್ಥೆ, ಅಪಾರ್ಟ್ಮೆಂಟ್, ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ ಶೇ. 1 ರಷ್ಟು ಮೇಲ್ತೆರಿಗೆ

ಬೆಂಗಳೂರು: ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಅಪಾರ್ಟ್ಮೆಂಟ್, ವಾಣಿಜ್ಯ ಸಂಕೀರ್ಣ, ಕೈಗಾರಿಕೆ ಸೇರಿದಂತೆ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ ಆಸ್ತಿ ತೆರಿಗೆಯೊಂದಿಗೆ ಶೇಕಡ 1ರಷ್ಟು ಅಗ್ನಿಶಾಮಕ ಸೆಸ್ ವಿಧಿಸಲು ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.

ಬಹುಮಹಡಿ ಕಟ್ಟಡಗಳಲ್ಲಿ ಅಗ್ನಿದುರಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಳ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಹೊಸದಾಗಿ ನಿರ್ಮಾಣವಾಗುವ ಎಲ್ಲಾ ಬಹು ಮಹಡಿ ಕಟ್ಟಡಗಳಿಗೆ ಈ ನಿರ್ಧಾರ ಅನ್ವಯವಾಗಲಿದ್ದು, ಆಸ್ತಿ ತೆರಿಗೆಯೊಂದಿಗೆ ಶೇಕಡ 1 ರಷ್ಟು ಫೈರ್ ಸೆಸ್(ಅಗ್ನಿಶಾಮಕ ಸೆಸ್ –ಮೇಲ್ತೆರಿಗೆ) ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಕರ್ನಾಟಕ ಅಗ್ನಿಶಾಮಕ ತಿದ್ದುಪಡಿ ವಿಧೇಯಕ -2025ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಗಸ್ಟ್ 11ರಿಂದ ಆರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular