HomeLatest NewsGOOD NEWS : ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಪಾಸ್...

GOOD NEWS : ರಾಜ್ಯದ SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಪಾಸ್ ಆಗಲು 35 % ಅಲ್ಲ 33 % ಸಾಕು.!

ಬೆಂಗಳೂರು : ರಾಜ್ಯದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪರೀಕ್ಷಾ ಪದ್ದತಿಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಕರಡು ನಿಯಮಾವಳಿ ಪ್ರಕಟಿಸಿದೆ. ಇನ್ಮುಂದೆ ಪಾಸ್ ಆಗಲು 35 % ಅಲ್ಲ 33 % ಪಡೆದರೆ ಸಾಕು ಎಂದು ಹೇಳಿದೆ.

ರಾಜ್ಯ ಸರ್ಕಾರ ಗುರುವಾರ ಕರಡು ನಿಯಮಾವಳಿ ಪ್ರಕ ಟಿಸಿದ್ದು, ಪಾಸಾಗಲು ಲಿಖಿತ ಪರೀಕ್ಷೆ ಮತ್ತು ಆಂತ ರಿಕ ಮೌಲ್ಯಮಾಪನ ಎರಡೂ ಸೇರಿ ಶೇ.33 ಅಂಕ ಪಡೆದರೆ ಸಾಕು ಎಂದು ಹೇಳಿದೆ. ಪ್ರತಿ ವಿಷಯ ದಲ್ಲಿ ಆಂತರಿಕ ಮೌಲ್ಯಮಾಪನದಲ್ಲಿ ಶೇ.20ಕ್ಕೆ 20 ಅಂಕ ಪಡೆದರೆ ಉಳಿದ 13 ಅಂಕಗಳನ್ನು ಲಿಖಿತ ಪಡೆದರೂ ವಿದ್ಯಾರ್ಥಿ ಪಾಸ್! ಆಗುತ್ತಾನೆ.

ಕರ್ನಾಟಕ ಸರ್ಕಾರವು, 1983 ರ ಕರ್ನಾಟಕ ಶಿಕ್ಷಣ ಕಾಯ್ದೆಯ (1995ರ ಕರ್ನಾಟಕ ಕಾಯ್ದೆ- 1) ಸೆಕ್ಷನ್ 7ರ ಉಪವಿಭಾಗ (1) ರ ಷರತ್ತು (i) ಮತ್ತು ಸೆಕ್ಷನ್ 145 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕೆಳಗಿನಂತೆ ಕರಡು ತಿದ್ದುಪಡಿ ನಿಯಮಗಳನ್ನು ಪ್ರಕಟಿಸಲಾಗಿದೆ. ಇದರಿಂದ ಪರಿಣಾಮ ಬೀರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ಅವಧಿ ಮುಗಿದ ನಂತರ ಸದರಿ ಕರಡು ನಿಯಮಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560 001 ರವರಿಗೆ ಸಲ್ಲಿಸಬಹುದು.

ಕರಡು ನಿಯಮಗಳು

  1. ಶೀರ್ಷಿಕೆ, ಪ್ರಾರಂಭ ಮತ್ತು ಅನ್ವಯಿಸುವಿಕೆ:- (1) ಈ ನಿಯಮಗಳನ್ನು ಕರ್ನಾಟಕ ಪದವಿ ಪೂರ್ವ ಪರೀಕ್ಷೆ
    (ಮೌಲ್ಯಮಾಪನ ವಿಧಾನ) ನಿಯಮಗಳು, 2025 ಎಂದು ಕರೆಯತಕ್ಕದ್ದು.
    (2) ಅಧಿಕೃತ ಗೆಜೆಟ್ನಲ್ಲಿ ಅವುಗಳ ಅಂತಿಮ ಪ್ರಕಟಣೆಯ ದಿನಾಂಕದಿಂದ ಅವು ಜಾರಿಗೆ ಬರುತ್ತವೆ.
    (3) ಈ ನಿಯಮಗಳು 2025-26ನೇ ಶೈಕ್ಷಣಿಕ ವರ್ಷದಿಂದ ಮತ್ತು ನಂತರದ ಶೈಕ್ಷಣಿಕ ವರ್ಷದಿಂದ ಮಂಡಳಿಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ದ್ವಿತೀಯ ಪಿ.ಯಿ.ಸಿ ವಿದ್ಯಾರ್ಥಿಗಳಿಗೆ ಅನ್ವಯಿಸುತ್ತವೆ.
  2. ಕನಿಷ್ಠ ಉತ್ತೀರ್ಣ ಶೇಕಡಾವಾರು: – ಕನಿಷ್ಠ ಉತ್ತೀರ್ಣ ಶೇಕಡಾವಾರು ಪ್ರಮಾಣವನ್ನು ಈ ಕೆಳಗಿನಂತೆನಿಯಂತ್ರಿಸಲಾಗುತ್ತದೆ, ಅವುಗಳೆಂದರೆ:-
    ಎ) ಅಭ್ಯರ್ಥಿಯು ಪ್ರತಿ ವಿಷಯದಲ್ಲಿ ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಥವಾ ಪ್ರಾಯೋಗಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಳಗೊಂಡಂತೆ ಪ್ರತಿ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳನ್ನು ಪಡೆದಲ್ಲಿ ಹಾಗೂ ಎಲ್ಲಾ ವಿಷಯಗಳಲ್ಲಿ ಒಟ್ಟಾರೆಯಾಗಿ 33% ಅಂಕಗಳನ್ನು ಪಡೆದಲ್ಲಿ ಅಂತಹ ಅಭ್ಯರ್ಥಿಯನ್ನು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲಾಗುತ್ತದೆ.
    (ಬಿ) ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ
    ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
    (ಸಿ) ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳನ್ನು ಪಡೆಯಬೇಕು:
    ಆದರೆ, ಈ ಕನಿಷ್ಠ ಅಂಕಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮತ್ತು ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದ ಷರತ್ತುಗಳಿಗೆ ಒಳಪಟ್ಟು ಸಡಿಲಿಸಬಹುದು ಅಥವಾ ಮಾರ್ಪಡಿಸಬಹುದು.
  3. ಪ್ರಾಯೋಗಿಕ ಪರೀಕ್ಷೆಗಳಿಗೆ ಸಾಮಾನ್ಯ ಷರತ್ತುಗಳು:- ಪ್ರಾಯೋಗಿಕ ಅಂಶವನ್ನು ಹೊಂದಿರುವ
    ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂಚಿಕೆಯಿಂದ ವಿಚಲನಗೊಂಡು, ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು ಮತ್ತು ಉಳಿದ 10 ಅಂಕಗಳನ್ನು ಈ ಕೆಳಗಿನ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗೆ ನೀಡಲಾಗುತ್ತದೆ, ಅವುಗಳೆಂದರೆ
    (ಎ) ಪ್ರತಿ ವಿಷಯದಲ್ಲೂ (ತಾತ್ವಿಕ ಮತ್ತು ಪ್ರಾಯೋಗಿಕ ತರಗತಿಗಳು ಸೇರಿದಂತೆ) ಕನಿಷ್ಠ 75% ಹಾಜರಾತಿಯನ್ನು ಹೊಂದಿದಲ್ಲಿ, ಅಂತಹ ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗುತ್ತಾರೆ;
    (ಬಿ) ಅಭ್ಯರ್ಥಿಯು ಪ್ರತಿಯೊಂದು ಪ್ರಾಯೋಗಿಕ ವಿಷಯಕ್ಕೆ ನಿರ್ದಿಷ್ಟಪಡಿಸಿದ ಕನಿಷ್ಠ ಸಂಖ್ಯೆಯ ಪ್ರಾಯೋಗಗಳನ್ನು ನಿರ್ವಹಿಸಿರಬೇಕು.
    (ಸಿ) ಅಭ್ಯರ್ಥಿಯು ಪ್ರಾಯೋಗಿಕ ದಾಖಲೆ ಪುಸ್ತಕಗಳಲ್ಲಿ ನಿರ್ವಹಿಸಿದ ಪ್ರಯೋಗಗಳನ್ನು ದಾಖಲಿಸಿ ಅದನ್ನು ಸಂಬಂಧಿಸಿದ ವಿಷಯದ ಉಪನ್ಯಾಸಕರಿಂದ ದೃಢೀಕರಿಸಿ ಸಲ್ಲಿಸಿರಬೇಕು ಮತ್ತು
    (ಡಿ) ಅಭ್ಯರ್ಥಿಯು ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಿರಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular