ಬೆಂಗಳೂರು : ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿ ಅರೆಸ್ಟ್ ಆಗಿದ್ದು, ಬಂಧಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ಹೌದು, ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಿರಣ್ ಅಲಿಯಾಸ್ ಡೆಡ್ಲಿ ಕಿರಣ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.
ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.ಬಿಕ್ಲು ಶಿವ ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್ ಜಗದೀಶ್ ತಲೆಮರೆಸಿಕೊಂಡಿದ್ದು, ಮತ್ತೊಂದೆಡೆ ಆತ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇನ್ನು ಪ್ರಕರಣದ ಎ5 ಆರೋಪಿಯಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಸಾಕ್ಷ್ಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ಬೆಳವಣಿಗೆ ನಡುವೆ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.