ಮಂಡಿ: ಬಾರಿಗೆ ಬಸ್ ವೊಂದು ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಡಿದಾದ ಕಣಿವೆಯ ರಸ್ತೆಯಿಂದ ಬಸ್ 100 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ದುರಂತದಲ್ಲಿ ನಾಲ್ವರು ಮಹಿಳೆಯರು ಸೇರಿ 8 ಜನರು ಮೃತಪಟ್ಟಿದ್ದಾರೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಸ್ ಸರಕಾಘಾಟ್ ನಿಂದ ದುರ್ಗಾಪುರಕ್ಕೆ ತೆರಳುತ್ತಿದ್ದ ವೇಳೆ ಮಸೆರನ್ ಬಳಿಯ ತರಂಗ್ಲಾದಲ್ಲಿ ಅಪಘಾತಕ್ಕೀಡಾಗಿದೆ.