ಶಿವಮೊಗ್ಗ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನವಿಲೆ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

