HomeLatest NewsBREAKING: ಶಾಲೆ ಮೇಲ್ಛಾವಣಿ ಕುಸಿದು ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

BREAKING: ಶಾಲೆ ಮೇಲ್ಛಾವಣಿ ಕುಸಿದು ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಜೈಪುರ: ಭಾರಿ ಮಳೆಯಿಂದಾಗಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ರಾಜಸ್ಥಾನದ ಝಲ್ವಾರ್ ನಲ್ಲಿ ಈ ಘಟನೆ ನಡೆದಿದೆ.

ಶಾಲೆ ಕಟ್ಟಡ ಕುಸಿತ ಪ್ರಕರಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕಿ ಸೇರಿ 7 ಜನರು ಮೃತಪತಟ್ಟಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ದುರಂತದಲ್ಲಿ ಈವರೆಗೆ 6 ವಿದ್ಯಾರ್ಥಿಗಳು, ಓರ್ವ ಶಿಕ್ಷಕಿ ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಘಟನೆ ವೇಳೆ ಶಾಲೆಯಲ್ಲಿ 32 ವಿದ್ಯಾರ್ಥಿಗಳು ಇದ್ದರು. ಹಲವು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular