ಮಡಿಕೇರಿ : ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ಈ ಘಟನೆ ನಡೆದಿದೆ. ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟರೆ, ಮತ್ತಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮೃತ ನಾಲ್ವರು ಗೋಣಿಕೊಪ್ಪದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .ವೇಗವಾಗಿ ಬರುತ್ತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
TAGGED:ಭೀಕರ ಅಪಘಾತ