HomeLatest Newsಪದವೀಧರರ ಖಾತೆಗೆ 3 ಸಾವಿರ ರೂ. ಜಮಾ: ಯುವನಿಧಿ ಯೋಜನೆ ವಿಶೇಷ ನೋಂದಣಿ ಅಭಿಯಾನ

ಪದವೀಧರರ ಖಾತೆಗೆ 3 ಸಾವಿರ ರೂ. ಜಮಾ: ಯುವನಿಧಿ ಯೋಜನೆ ವಿಶೇಷ ನೋಂದಣಿ ಅಭಿಯಾನ

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾ ಪದವೀಧರರು 2025-26ನೇ ಸಾಲಿನ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 7 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಯಡಿ ಪದವೀಧರರಿಗೆ 3000 ರೂ. ಮತ್ತು ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುತ್ತದೆ. 2023-24, 2024-25 ಮತ್ತು 2025-26 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್  ಸೇವಾಸಿಂಧು ಪೋರ್ಟಲ್, ಕರ್ನಾಟಕ-1, ಗ್ರಾಮ -1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹತೆ:

ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ/180 ದಿನಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.

ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾ ಅಧ್ಯಯನ ಮಾಡಿದವರು).

ಬೇಕಾದ ದಾಖಲೆ:

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಜೋಡಣೆಗೊಂಡ ಮೊಬೈಲ್ ಸಂಖ್ಯೆ.

ಪ್ರತಿ ತಿಂಗಳು 25 ರೊಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ನೋಂದಾಯಿಸಿಕೊಳ್ಳಲು ಸೇವಾ ಸಿಂಧು ವೆಬ್ ಪೋರ್ಟಲ್ ವಿಳಾಸ:  https://sevasindhugs.karnataka.gov.in ಗೆ ಭೇಟಿ ನೀಡಬೇಕು.

ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಸಮಸ್ಯೆಗಳಾದಲ್ಲಿ ಸಹಾಯವಾಣಿ ಸಂಖ್ಯೆ ದೂ.18005999918, 18005997154 ಗೆ ಕರೆ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094, 8861866752 ಹಾಗೂ ಸಂಬAಧಿಸಿದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular