HomeLatest NewsRain alert Karnataka : ರಾಜ್ಯಾದ್ಯಂತ 1 ವಾರ ಬಿರುಗಾಳಿ ಸಹಿತ ಭಾರಿ ಮಳೆ :...

Rain alert Karnataka : ರಾಜ್ಯಾದ್ಯಂತ 1 ವಾರ ಬಿರುಗಾಳಿ ಸಹಿತ ಭಾರಿ ಮಳೆ : ಈ ಜಿಲ್ಲೆಗಳಿಗೆ ರೆಡ್, ಯೆಲ್ಲೋ ಅಲರ್ಟ್ ಘೋಷಣೆ.!

ಬೆಂಗಳೂರು : ಮುಂದಿನ 1 ವಾರ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಕೊಡಗು, ಹಾಸನ, ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹಲವು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ. ಮುಂದುವರೆದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು. ದಾವಣಗೆರೆ,. ಚಿತ್ರದುರ್ಗ, ಬೆಳಗಾವಿ, ದಾರವಾಡ, ವಿಜಯಪುರ. ಕಲಬುರಗಿ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular