HomeLatest Newsಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕ..! ಮದ್ಯಪಾನ ಮಾಡಿ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕ..! ಮದ್ಯಪಾನ ಮಾಡಿ ಮಲಗಿದ್ದ ಮುಖ್ಯ ಶಿಕ್ಷಕ ಅಮಾನತು

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗೋನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮದ್ಯ ಸೇವಿಸಿ ಶಾಲೆಯ ಅಡುಗೆ ಕೋಣೆ ಮುಂದೆ ಮಲಗಿದ್ದ ಘಟನೆ ನಡೆದಿದೆ.

ಗುರುವಾರ ಮುಖ್ಯ ಶಿಕ್ಷಕ ಮದ್ಯಪಾನ ಮಾಡಿ ಮಲಗಿದ ಘಟನೆ ನಡೆದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ ಅಮಾನತು ಮಾಡಿದೆ. ನಿಂಗಪ್ಪ ಅಮಾನತುಗೊಂಡ ಮುಖ್ಯ ಶಿಕ್ಷಕ. ಮದ್ಯಪಾನ ಮಾಡಿ ಶಾಲೆಗೆ ಬಂದಿದ್ದ ನಿಂಗಪ್ಪ ಅಡುಗೆ ಕೋಣೆ ಮುಂಭಾಗ ಮಲಗಿದ್ದಾರೆ. ಬಿಸಿಯೂಟ ಸಿಬ್ಬಂದಿಗೆ ಅಡುಗೆ ಕೋಣೆ ಬಾಗಿಲು ತೆರೆಯಲು ಅವಕಾಶ ನೀಡದೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಮಾಹಿತಿ ತಿಳಿದ ಪೋಷಕರು, ಗ್ರಾಮಸ್ಥರು ಶಾಲೆಗೆ ಬಂದು ಶಿಕ್ಷಕನನ್ನು ಎಬ್ಬಿಸಿ ಕಳುಹಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮುಖ್ಯ ಶಿಕ್ಷಕ ನಿಂಗಪ್ಪನನ್ನು ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular