ಭುವನೇಶ್ವರ: ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ 10 ನೇ ತರಗತಿಯ ಹಾಸ್ಟೆಲ್ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವುದು ಗೊತ್ತಾಗಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ
ಹೌದು, ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಒಡಿಶಾದ ಕಂಧಮಾಲ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ಇಬ್ಬರು 10 ನೇ ತರಗತಿಯ ಹುಡುಗಿಯರು ನಿಯಮಿತ ವೈದ್ಯಕೀಯ ತಪಾಸಣೆಯ ಸಮಯದಲ್ಲಿ ಗರ್ಭಿಣಿಯಾಗಿರುವುದು ಕಂಡುಬಂದಿದ್ದು, ಸರ್ಕಾರಿ ಸಂಸ್ಥೆಗಳಲ್ಲಿ ಅಪ್ರಾಪ್ತ ಬಾಲಕಿಯರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.
ಕಂಧಮಾಲ್‌ನ ತುಮುಡಿಬಂಧ್ ಬ್ಲಾಕ್‌ನಲ್ಲಿರುವ ಎರಡು ಸರ್ಕಾರಿ ವಸತಿ ಬಾಲಕಿಯರ ಪ್ರೌಢಶಾಲೆಗಳಲ್ಲಿ ಆರೋಗ್ಯ ತಪಾಸಣೆಯ ಸಮಯದಲ್ಲಿ ಗರ್ಭಧಾರಣೆಯು ಬೆಳಕಿಗೆ ಬಂದಿದೆ. ಬೇಸಿಗೆ ರಜೆಯ ನಂತರ ಕೆಲವೇ ವಾರಗಳ ಹಿಂದೆ ಇಬ್ಬರೂ ಹುಡುಗಿಯರು ತಮ್ಮ ಹಾಸ್ಟೆಲ್‌ಗಳಿಗೆ ಮರಳಿದ್ದರು.
ಹುಡುಗಿಯರು ತಮ್ಮ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಪಡೆದುಕೊಳ್ಳದ ಕಾರಣ ಹಾಸ್ಟೆಲ್ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಲಕಿಯರನ್ನು ಪ್ರಶ್ನಿಸಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಗ ಅವರ ಗರ್ಭಧಾರಣೆಯನ್ನು ದೃಢಪಡಿಸಿದೆ.
ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು, ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ. ಒಂದು ಪ್ರಕರಣವನ್ನು ಕೋಟ್‌ಗಢ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಂದು ಪ್ರಕರಣವನ್ನು ಬೆಲ್‌ಘರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಎಂದು ಬಾಲಿಗುಡದ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ(SDPO) ರಾಮೇಂದ್ರ ಪ್ರಸಾದ್ ಹೇಳಿದ್ದಾರೆ.