ನವದೆಹಲಿ: ಕರ್ನಾಟಕದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚದಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಜಗದೀಶ್ ಶೆಟ್ಟರ್ ಅವರ ಪ್ರಶ್ನೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ ಉತ್ತರ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಅವರಿಗೆ ಸಚಿವ ಜೆ.ಪಿ. ನಡ್ಡಾ ಪತ್ರ ಬರೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಜನೌಷಧಿ ಕೇಂದ್ರದಲ್ಲಿ ಗುಣಮಟ್ಟದ ಔಷಧಗಳು ಕಡಿಮೆ ಬೆಲೆಗೆ ದೊರೆಯುತ್ತಿದ್ದು, ರಾಜ್ಯದ ನಾಗರಿಕರಿಗೆ ಕಳೆದ 10 ವರ್ಷಗಳಲ್ಲಿ 5700 ಕೋಟಿ ರೂ. ಉಳಿತಾಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ.