ಕೊಡಗು: ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಸುಷ್ಮಾ (29) ಮೃತ ಮಹಿಳೆ. ಮನೆಯಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ.
ಮೃತ ಸುಷ್ಮಾ ಕಲಬುರಗಿ ಮೂಲದವರು. ಕೂಲಿ ಕೆಲಸಕ್ಕಾಗಿ ಸುಷ್ಮಾ ಕುಟುಂಬ ಕಲಬುರಗಿಯಿಂದ ಬಂದು ಹಾನಗಲ್ಲು ಗ್ರಾಮದಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ.