ಬೆಂಗಳೂರು: ಅಪರಿಚಿತ ಗ್ಯಾಂಗ್ ನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ರವಿಕುಮಾರ್ (26) ಮೃತ ಯುವಕ. ನಿನ್ನೆ ತಡರಾತ್ರಿ ಬೈಕ್ ನಲ್ಲಿ ಬಂದಿದ್ದ ಅಪರಿಚಿತರು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಹಲ್ಲೆಗೊಳಗಾಗಿದ್ದ ಯುವಕನನ್ನು ಆನೇಕಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಕೊನೆಯುಸಿರೆಳೆದಿದ್ದಾನೆ.
ಯಾವ ಕಾರಣಕ್ಕಾಗಿ ಯುವಕನ ಮೇಲೆ ಹಲ್ಲೆ ನಡೆದಿತ್ತು? ಹಲ್ಲೆ ನಡಿಸಿದವರು ಯಾರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.