ಬೆಂಗಳೂರು : ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ ಮತ್ತು ಯೂಥ್ 4 ಜಾಬ್ಸ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಿಶೇಷ ಚೇತನ ಅಭ್ಯರ್ಥಿಗಳಿಗಾಗಿ ಜುಲೈ 29 ರಂದು ಬೆಳಿಗ್ಗೆ 10.00 ಗಂಟೆಗೆ ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ. ಕಟ್ಟಡ , ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ, ತುಮಕೂರು ರಸ್ತೆ (ಮಾಡ್ರನ್ ಬ್ರೆಡ್ ಪ್ಯಾಕ್ಟರಿ ಹತ್ತಿರ), ಬೆಂಗಳೂರು-560022 ಇಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 15 ಕ್ಕೂ ಅಧಿಕ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು ತಮ್ಮ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು.
ಎಸ್.ಎಸ್.ಎಲ್.ಸಿ. ಉತ್ತೀರ್ಣ & ಅನುತ್ತೀರ್ಣ/ಪಿ.ಯು.ಸಿ/ಪದವಿ ಮತ್ತು ಇತರೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಯು.ಡಿ.ಐ.ಡಿ ದಾಖಲೆ ಮತ್ತು ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿಗಳು ತಮ್ಮ ಕಂಪನಿಗಳ ನಿಯಮಾನುಸಾರ ವೇತನ & ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ, ಸಿ.ಒ.ಇ ಕಟ್ಟಡ, ತುಮಕೂರು ರಸ್ತೆ, ಬೆಂಗಳೂರು- 560022 ಅಥವಾ ದೂರವಾಣಿ ಸಂಖ್ಯೆ: 080-29752338 ಮತ್ತು ಮೊಬೈಲ್ ಸಂಖ್ಯೆ 9945809276 / 7795739724 / 7019769281 ಅನ್ನು ಸಂಪರ್ಕಿಸಬಹುದುದಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬೆಂಗಳೂರು, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.