BIG NEWS: 108 ಆಂಬುಲೆನ್ಸ್ ನೌಕರರಿಂದ ಮತ್ತೆ ಮುಷ್ಕರ ಎಚ್ಚರಿಕೆ!

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ 108 ಆಂಬುಲೆನ್ಸ್ ಸೇವೆ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

108 ಆಂಬುಲೆನ್ಸ್ ಆರೋಗ್ಯ ಕವಚ ಸೇವೆಯನ್ನು ಈವರೆಗೆ ಜಿವಿಕೆ ಎಂಬ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿತ್ತು. ಇನ್ಮುಂದೆ ಆರೋಗ್ಯ ಇಲಾಖೆಯೇ ನಿರ್ವಹಣೆ ಮಾಡಲಿದೆ. ಈವರೆಗೆ ಆಂಬುಲೆನ್ಸ್ ಸಿಬ್ಬಂದಿಗಳಾಗಿ ಕೆಲಸ ಮಾಡುತ್ತಿದ್ದ ನೌಕರರನ್ನು ಮುಂದುವರೆಸುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ನೌಕರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

108 ಆಂಬುಲೆನ್ಸ್ ನಲ್ಲಿ 3500 ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ಮುಂಬರುವ ದಿನಗಳಲ್ಲಿ ಇವರನ್ನೇ ಮುಂದುವರೆಸುವ ಬಗ್ಗೆ ಸರ್ಕಾರ ಅಥವಾ ಇಲಾಖೆ ಸ್ಪಷ್ಟಪಡಿಸಿಲ್ಲ. ಅಲ್ಲದೇ ಎರಡು ಪಾಳಿಯ ಆಂಬುಲೆನ್ಸ್ ಸಿಬ್ಬಂದಿಯ ಸೇವೆಯನ್ನು ಮೂರು ಪಾಳಿ ಮಾಡಲಾಗಿದೆ. ಇದು ಅವೈಜ್ಞಾನಿಕ. ಗ್ರಾಮೀಣ ಪ್ರದೇಶದಲ್ಲಿ ನೌಕರರಿಗೆ ಸಾರಿಗೆ ಸೇವೆ ಇಲ್ಲ. ಮಹಿಳಾ ಸಿಬ್ಬಂದಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಆಂಬುಲೆನ್ಸ್ ಸೇವೆ ನೌಕರರು ಆಗಸ್ಟ್ 1ರಿಂದ ಕೆಲಸಕ್ಕೆ ಗೈರಾಗಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read