ಮೈಸೂರು: ಸಿಡಿಮದ್ದು ಸ್ಫೋಟಗೊಂಡು ಅವಘಡ ಸಂಭವಿಸಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹುಳಿಯಾಳು ಗ್ರಾಮದಲ್ಲಿ ನಡೆದಿದೆ.
54 ವರ್ಷದ ಕಮಲಮ್ಮ ಗಂಭೀರವಾಗಿ ಗಾಯಗೊಂಡಿರುವ ಮಹಿಳೆ. ಮನೆಯ ಬಳಿ ಮಹಿಳೆಗೆ ಕವರ್ ಸಿಕ್ಕಿತ್ತು. ಕವರ್ ತೆರೆಯುತ್ತಿದಂತೆ ಸಿಡಿಮದ್ದು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.