BIG NEWS: ಪಕ್ಕದ ಮನೆಯ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಲಖನೌ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನನ್ನು ಕಾಲಿಗೆ ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬಂಡಾದಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ಪಕ್ಕದ ಮನೆಯವನೇ ಆದ ಆರೋಪಿ ಈ ಕೃತ್ಯವೆಸಗಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ 20 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಸಂಜೆ ಬಾಲಕಿಯನ್ನು ತನ್ನ ಮನೆಗೆ ಎಳೆದೊಯ್ದ ಆರೋಪಿ ಈ ನೀಚ ಕೃತ್ಯವೆಸಗಿದ್ದಾನೆ. ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. ಆರೋಪಿ ಬಂಧನಕ್ಕೆ ತೆರಳಿದ್ದಾಗ ಆರೋಪಿ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಎರಡೂ ಕಾಲುಗಳಿಗೆ ಗುಂಡೆಟು ಹೊಡೆದು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಾಶಲ್ ಬನ್ಸಾಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read