ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇದಾರನಾಥದ ಗೌರಿಕುಂಡ ಬಳಿ ಭೂಕುಸಿತ ಸಂಭವಿಸಿದೆ.
ಭೂಕುಸಿತದಿಂದಾಗಿ ಗೌರಿಕುಂಡದ ಬಳಿ ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಯಾತ್ರಾರ್ಥಿಗಳು ಅರ್ಧದಲ್ಲೇ ಯಾತ್ರೆ ಸ್ಥಗಿತಗೊಳಿಸಿ ಸುರಕ್ಷಿತ ಪ್ರದೇಶಕ್ಕೆ ವಾಪಸ್ ಆಗಿದ್ದಾರೆ.
ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ತಂಡಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಭೂಕುಸಿತ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಸಂಚಾರಾಕ್ಕೆ ಅನುವು ಮಾಡಿಕೊಟ್ಟ ಬಳಿಕ ಯಾತ್ರೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆದಾರನಾಥ, ಗೌರಿಕುಂಡ ಸೇರಿದಂತೆ ಉತ್ತರಾಅಖಂಡದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ.