ಹಾಸನ: ಯೂರಿಯಾ ರಸಗೊಬ್ಬರ ಪೂರಿಕೆ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ ಎಂದಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ 5 ಲಕ್ಷ ಹೆಕ್ಟೇರ್ ಹೆಚ್ಚು ಬಿತ್ತನೆ ಆಗಿರುವುದರಿಂದ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.
ಮಳೆ ಪ್ರಮಾಣ ಹೆಚ್ಚಾಗಿದೆ, ಈ ಬಾರಿ ಮುಂಗಾರು ಮಳೆ ಬೇಗ ಶುರುವಾಗಿದೆ. ಜೋಳ ಬಿತ್ತನೆ ಜಾಸ್ತಿಯಾಗಿದೆ. ಹಾಗಾಗಿ ರೈತರು ಹೆಚ್ಚು ಗೊಬ್ಬರ ಉಪಯೋಗಿಸುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.