ಚಿಕ್ಕಮಗಳೂರು: ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಾರ್ಮಡಿಘಾಟ್ ನ ಬಿದಿರುತಳ ಪ್ರದೇಶದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮದ ನಿಷೇಧಿತ ಪ್ರದೇಶಕ್ಕೆ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ 103 ಉದ್ಯೋಗಿಗಳನ್ನು ಚಾರಣಕ್ಕೆ ಕರೆದೊಯ್ಯಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಳೂರು ಠಾಣೆ ಪೊಲೀಸರು 103 ಪ್ರವಾಸಿಗರನ್ನು ವಶಕ್ಕೆ ಪಡೆದಿದ್ದಾರೆ.
2 ಬಸ್, 3 ಪಿಕಪ್ ವಾಹನಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಟೂರಿಸ್ಟ್ ಪ್ಯಾಕೇಜ್ ಅಡಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಉದ್ಯೋಗಿಗಳನ್ನು ಪ್ರವಾಸಕ್ಕೆ ಕರೆತರಲಾಗಿತ್ತು ಎಂದು ತಿಳೀದಿಬಂದಿದೆ.