HomeKarnatakaರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನೂ 208 ಸೇವೆ:...

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನೂ 208 ಸೇವೆ: ಒಂದೇ ಸೂರಿನಡಿ ಎಲ್ಲಾ ಇಲಾಖೆ ಸೌಲಭ್ಯ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಪ್ರಸ್ತುತ 81 ಸೇವೆಗಳನ್ನು ನೀಡಲಾಗುತ್ತಿದ್ದು, ಇನ್ನೂ 28 ಸೇವೆಗಳನ್ನು ಶೀಘ್ರವೇ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆರಂಭಿಸಲಾಗುವುದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ನೀಡಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಆರಂಭಿಸುವ ಬಗ್ಗೆ 2024- 25 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಅಂತೆಯೇ ಗ್ರಾಮೀಣಾಭಿವೃದ್ಧಿ ಇಲಾಖೆ ವಿದ್ಯುನ್ಮಾನ ನಾಗರಿಕ ಸೇವಾ ನಿರ್ದೇಶನಾಲಯದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಗ್ರಾಮೀಣ ಜನತೆಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಸೇವಾ ಸಿಂಧು ಪೋರ್ಟಲ್ ಮೂಲಕ 46 ಇಲಾಖೆಗಳ 800ಕ್ಕೂ ಅಧಿಕ ಸೇವೆ ನೀಡುತ್ತಿದ್ದು, ಇವುಗಳಲ್ಲಿ ಗ್ರಾಮೀಣ ಜನರಿಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಕಲ್ಪಿಸಲಿದ್ದು, ಒಂದೇ ಸೂರಿನಡಿ ಗ್ರಾಮೀಣ ಜನತೆಗೆ ಎಲ್ಲ ಇಲಾಖೆಗಳ ಸೇವೆ ಸಿಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular