ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ್ಶನ್ ಫ್ಯಾನ್ಸ್ ಕಾಮೆಂಟ್ ಗೆ ರಮ್ಯಾ ಕೆಂಡಾಮಂಡಲರಾಗಿದ್ದಾರೆ.
ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ- ನನ್ನ ಇನ್‌ಸ್ಟಾಗ್ರಾಮ್‌ಗೆ ಸ್ವಾಗತ, ರೇಣುಕಸ್ವಾಮಿ ಅವರ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್‌ಗಳೇ ಸಾಕ್ಷಿ! ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ರಮ್ಯಾ ಅವರು ದರ್ಶನ್ ಜಾಮೀನು ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಪ್ರಸ್ತಾಪಿಸಿ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಆಶಾಕಿರಣವಾಗಿದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಇದೆ ಎಂದು ಪೋಸ್ಟ್ ಹಾಕಿದ್ದರು. ಇದಕ್ಕೆ ಬಂದ ಕಾಮೆಂಟ್ ಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

