HomeLatest Newsಏರ್ ಇಂಡಿಯಾ ವಿಮಾನ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಮಧ್ಯಂತರ ಪರಿಹಾರ

ಏರ್ ಇಂಡಿಯಾ ವಿಮಾನ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಮಧ್ಯಂತರ ಪರಿಹಾರ

ಮುಂಬೈ: ಅಹಮದಾಬಾದ್ ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ 166 ಮಂದಿ ಕುಟುಂಬದವರಿಗೆ ತಲಾ 25 ಲಕ್ಷ ರೂ. ಮಧ್ಯಂತ ಪರಿಹಾರ ವಿತರಿಸಲಾಗಿದೆ.

ಮಧ್ಯಂತರ ಪರಿಹಾರವನ್ನು ಏರ್ ಲೈನ್ ವಿಮೆ ವತಿಯಿಂದ ನೀಡಲಾಗಿದ್ದು, ವಿಮಾನದಲ್ಲಿದ್ದ 147 ಪ್ರಯಾಣಿಕರು ಮತ್ತು ಇತರೆ 19 ಮಂದಿ ಕುಟುಂಬದವರಿಗೆ ನೀಡಲಾಗಿದೆ.

ದುರಂತದಲ್ಲಿ ಮೃತಪಟ್ಟ ಏರ್ ಇಂಡಿಯಾ ವಿಮಾನದ 12 ಸಿಬ್ಬಂದಿಗೆ ಪ್ರತ್ಯೇಕವಾಗಿ ವಿಮೆ ನೀಡಲಾಗುವುದು. ಇದರ ಬಗ್ಗೆ ಈಗಾಗಲೇ ಲೆಕ್ಕಾಚಾರ ಆರಂಭವಾಗಿದ್ದು, ಇದಕ್ಕೆ ಸಂಬಂಧಿತ ಹೆಚ್ಚುವರಿ ದಾಖಲೆಗಳನ್ನು ಸಂಗ್ರಹಿಸಿ ಪರಿಶೀಲಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತಪಟ್ಟ ಎಲ್ಲಾ ಪ್ರಯಾಣಿಕರಿಗೆ 25 ಲಕ್ಷ ರೂ. ಪ್ರಾಥಮಿಕ ಪರಿಹಾರ ಒಂದೇ ಮೊತ್ತದ ಪರಿಹಾರವಾಗಿದೆ. ನಂತರ ಅಂತಿಮವಾಗಿ ನೀಡಲಾಗುವ ಪರಿಹಾರದ ಮೊತ್ತದಲ್ಲಿ ವ್ಯತ್ಯಾಸವಾಗಲಿದೆ. ಉಳಿದಂತೆ ಮೃತಪಟ್ಟವರ 166 ಕುಟುಂಬಗಳ ದಾಖಲೆ ಪರಿಶೀಲಿಸಲಾಗಿದ್ದು, ಇನ್ನೂ ಕೆಲವು ದಾಖಲೆಗಳು ಪರಿಶೀಲನೆ ಹಂತದಲ್ಲಿ ಇವೆ. ಎಲ್ಲರಿಗೂ ಮುಂದಿನವಾರ ಅಂತಿಮ ಪರಿಹಾರ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular