BREAKING: ಹರಿದ್ವಾರದ ಮಾನಸಾದೇವಿ ಮಂದಿರದಲ್ಲಿ ಭೀಕರ ಕಾಲ್ತುಳಿತ: 7 ಜನರು ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಹರಿದ್ವಾರದ ಮಾನಸಾದೇವಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 7 ಜನರು ಮೃತಪಟ್ಟಿದ್ದಾರೆ.

ಮನಸಾದೇವಿ ದೇವಸ್ಥಾನಕ್ಕೆ ಇಂದು ಮುಂಜಾನೆ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಪೊಲೀಸರು, ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಗರ್ವಾಲ್ ಡಿವಿಷನ್ ಕಮಿಷನರ್ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read