ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಅಮಾನತುಗೊಂಡಿರುವ ಕೆ.ಎಸ್.ಆರ್.ಟಿ.ಸಿ ನೌಕರನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೆ.ಎಸ್.ಆರ್.ಟಿ.ಸಿ ಲೆಕ್ಕಪತ್ರ ವಿಭಾಗದ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ರಿಚರ್ಡ್.ಜೆ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ವರ್ಗಾವಣೆಗಾಗಿ ಹಾಗೂ ವಜಾಗೊಂಡ ನೌಕರನ ಪುನರ್ ನೇಮಕಕ್ಕಾಗಿ ರಿಚರ್ಡ್ ನಕಲಿ ದಾಖಲೆ ಸೃಷ್ಟಿಸಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಶಿಸ್ತುಪಾಲನಾಧಿಕಾರಿ ರಿಚರ್ಡ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.