ರಾಮನಗರ: ಕಾಂಗ್ರೆಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಡಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಸಾತನೂರಿನಲ್ಲಿ ನಡೆದಿದೆ.
ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ (45) ಕೊಲೆಯಾದ ಕಾಂಗ್ರೆಸ್ ಮುಖಂಡ. ಅಚ್ಚಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿದ್ದರು. ನಂಜೇಶ್ ನಾಲ್ಕು ದಿನಗಳ ಹಿಂದೆ ಸಾತನೂರು ಗ್ರಾಮದಲ್ಲಿ ಸೈಟ್ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದೇ ವಿಚಾರವಾಗಿ ಹಳೆ ದ್ವೇಷಕ್ಕೆ ಶ್ರೀನಿವಾಸ್ ಎಂಬಾತ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ನಂಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.