ಪುಣೆ: ಅಪಾರ್ಟ್ ಮೆಂಟ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ, 7 ಜನರನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ ಪುಣೆಯ ಅಪಾರ್ಟ್ ಮೆಂಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 7 ಜನರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ಮಾದಕ ವಸ್ತುಗಳು, ಮದ್ಯ, ಹುಕ್ಕಾ ಸೆಟಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪುಣೆ ನಗರದ ದುಬಾರಿ ಖರಾಡಿ ಪ್ರದೇಶದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಈ ದಾಳಿ ನಡೆದಿದೆ. ದಾಳಿ ವೇಳೆ ಐವರು ಪುರುಷರು, ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಒಬ್ಬರು ಮಹಿಳಾ ರಾಜಕಾಣಿಯ ಪತಿ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.