ರಾಮನಗರ: ಕಾಂಗ್ರೆಸ್ ಮುಖಂಡನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಮುಖಂಡರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರದ ಹೊಂಗಾಣಿದೊಡ್ದಿ ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಂಜೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆಗೈದಿದ್ದ ಘಟನೆ ನಡೆದಿತ್ತು. ಮೃತ ನಂಜೇಶ್ ಅವರ ಸ್ನೇಹಿತರಾಗಿದ್ದ ಬಿಜೆಪಿ ಮುಖಂಡ ಅಚ್ಚಲು ಕುಮಾರ್, ನಂಜೇಶ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಅಂತ್ರ್ಯಕ್ರಿಯೆಗೆ ಹೋಗಿದ್ದ ಅಚ್ಚಲು ಕುಮಾರ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮುಖದಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಕಾಂಗ್ರೆಸ್ ಮುಖಂಡ ಹೊಂಗಾಣಿದೊಡ್ಡಿ ಗ್ರಾಮದ ನಂಜೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಶ್ರೀನಿವಾಸ್ ಎಂಬಾತನ ವಿರಿದ್ಧ ಆರೋಪ ಕೇಳಿಬಂದಿದೆ.