ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನರಸಿಂಹರಾಜ ಠಾಣೆಯ ಇನ್ ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.
ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಗೊಳಿಸಿ ಮೈಸೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ನರಸಿಂಹರಾಜ ಠಾಣೆಯ ಇನ್ ಸ್ಪೆಕ್ಟರ್ ಆಗಿ ಶಬ್ಬೀರ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ನಿನ್ನೆ ಮಹಾರಾಷ್ಟ್ರ ಪೊಲೀಸರು ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದರು. ಮುಂಬೈ ಪೊಲೀಸರು ಕೋಟ್ಯಂತರ ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಂಡಿದ್ದರು.
ಮೈಸೂರಿನ ಹೊರವಲಯದಲ್ಲಿ ಮಾದಕ ವಸ್ತು ತಯಾರಿಕಾ ಘಟಕ ತಲೆಯೆತ್ತಿತ್ತು. ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅಮಾನತು ಮಾಡಿ ಆದೇಶಿಸಲಾಗಿದೆ.