ನವದೆಹಲಿ: ಆನ್ಲೈನ್ ಬೆಟ್ಟಿಂಗ್ ಆ್ಯಪ್ ಗಳ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ ದೈತ್ಯ ಕಂಪನಿಗಳಾದ ಗೂಗಲ್, ಮೆಟಾ ಗೆ ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತೆ ಸಮನ್ಸ್ ಜಾರಿ ಮಾಡಿದೆ.
ಇಂದು ವಿಚಾರಣೆಗೆ ಹಾಜರಾಗುವಂತೆ ಗೂಗಲ್, ಮೆಟಾ ಗೆ ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಲಾಗಿದೆ. ಜಾಹೀರಾತುಗಳ ಮೂಲಕ ಬೆಟ್ಟಿಂಗ್ ಆ್ಯಪ್ ಗಳಿಗೆ ನೆರವು ನೀಡಿದ ಆರೋಪದ ಮೇಲೆ ಸಮನ್ಸ್ ನೀಡಲಾಗಿದೆ. ಬೆಟ್ಟಿಂಗ್, ಜೂಜಾಟ ಲಿಂಕ್ ಹೊಂದಿರುವ ಆನ್ಲೈನ್ ಸಂಸ್ಥೆಗಳಿಗೆ ಹಣ ವರ್ಗಾವಣೆ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಆನ್ಲೈನ್ ಫ್ಲಾಟ್ ಫಾರ್ಮ್ ಗಳ ಬಗ್ಗೆ ತನಿಖೆ ನಡೆಸಿ ಈಗಾಗಲೇ ಹಲವು ನಟರು, ನಟಿಯರ ವಿರುದ್ಧವೂ ಕೇಸು ದಾಖಲಿಸಲಾಗಿದೆ.