BIG NEWS: ಲೋಕಸಭೆಯಲ್ಲಿ ಇಂದು ‘ಆಪರೇಷನ್ ಸಿಂದೂರ್’ ಬಗ್ಗೆ ವಿಶೇಷ ಚರ್ಚೆ: ಸುದೀರ್ಘ 16 ಗಂಟೆ ನಿಗದಿ

ನವದೆಹಲಿ: ಇಂದು ಲೋಕಸಭೆಯಲ್ಲಿ ಆಪರೇಷನ್ ಸಿಂದೂರ ವಿಚಾರದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಲಿದ್ದಾರೆ. ಸುದೀರ್ಘ 16 ಗಂಟೆಗಳ ಕಾಲ ಆಪರೇಷನ್ ಸಿಂದೂರ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿ ಪ್ರಕರಣ, ನಂತರ ಭಾರತೀಯ ಸೇನೆ ಉಗ್ರರ ನೆಲೆಗಳನ್ನು ನಾಶ ಮಾಡಲು ನಡೆಸಿದ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾನ್ಸೂನ್ ಸಂಸತ್ತಿನ ಅಧಿವೇಶನದಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂರ್ ಅಡಿಯಲ್ಲಿ ಭಾರತದ ಪ್ರತಿಕ್ರಿಯೆಯ ಕುರಿತು ವಿಶೇಷ ಚರ್ಚೆ ನಡೆಯಲಿದೆ ಎಂದಿದ್ದಾರೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಇದನ್ನು ನಿರ್ಧರಿಸಲಾಗಿದೆ. ಲೋಕಸಭೆಯಲ್ಲಿ ಚರ್ಚೆಗೆ 16 ಗಂಟೆಗಳನ್ನು ನಿಗದಿಪಡಿಸಲಾಗಿದೆ ಮತ್ತು ರಾಜ್ಯಸಭೆಯು ಮಂಗಳವಾರ 16 ಗಂಟೆಗಳ ಕಾಲ ಇದನ್ನು ಚರ್ಚಿಸಲಿದೆ ಎಂದು ಅವರು ಹೇಳಿದ್ದಾರೆ.

ವಿರೋಧ ಪಕ್ಷಗಳು ಆಪರೇಷನ್ ಸಿಂದೂರ್ ಕುರಿತು ಚರ್ಚೆಗೆ ಒತ್ತಾಯಿಸುತ್ತಿವೆ ಮತ್ತು ಸರ್ಕಾರವು ಮೊದಲ ದಿನದಿಂದಲೇ ಚರ್ಚೆಗೆ ಒಪ್ಪಿಕೊಂಡಿದೆ ಎಂದು ರಿಜಿಜು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read